ನೀವು ಪದವೀಧರರೇ? ಬೆಂಗಳೂರು ಅಥವಾ ಇತರ ಪ್ರಮುಖ ನಗರಗಳಲ್ಲಿ ಕೇಂದ್ರ ಸರ್ಕಾರಿ ಸ್ವಾಮ್ಯದ ಕಂಪನಿಯಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವಿರಾ? ಹಾಗಾದರೆ ನಿಮಗಾಗಿ ಒಂದು ಸುವರ್ಣ ಅವಕಾಶ ಇಲ್ಲಿದೆ. ಭಾರತ ಸರ್ಕಾರದ ಉದ್ದಿಮೆಯಾದ ಬಾಲ್ಮರ್ ಲಾರಿ ಮತ್ತು ಕಂಪನಿ ಲಿಮಿಟೆಡ್ (Balmer Lawrie & Co. Limited) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್, ಜೂನಿಯರ್ ಆಫೀಸರ್ ಸೇರಿದಂತೆ ಒಟ್ಟು 18 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ವಿಶೇಷವೆಂದರೆ ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ! ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ ಮತ್ತು ವಯೋಮಿತಿ
ನೇಮಕಾತಿ ನಡೆಯುತ್ತಿರುವ ಹುದ್ದೆಗಳು ಮತ್ತು ಅರ್ಹ ವಯೋಮಿತಿ ಈ ಕೆಳಗಿನಂತಿದೆ:
- ಜೂನಿಯರ್ ಆಫೀಸರ್ (Junior Officer): 04 ಹುದ್ದೆಗಳು (ಗರಿಷ್ಠ 30 ವರ್ಷ)
- ಅಸಿಸ್ಟೆಂಟ್ ಮ್ಯಾನೇಜರ್ (Assistant Manager): 10 ಹುದ್ದೆಗಳು (ಗರಿಷ್ಠ 32 ವರ್ಷ)
- ಡೆಪ್ಯುಟಿ ಮ್ಯಾನೇಜರ್ (Deputy Manager): 03 ಹುದ್ದೆಗಳು (ಗರಿಷ್ಠ 35 ವರ್ಷ)
- ಸೀನಿಯರ್ ಮ್ಯಾನೇಜರ್ (Senior Manager): 01 ಹುದ್ದೆ (ಗರಿಷ್ಠ 40 ವರ್ಷ)
(ಗಮನಿಸಿ: ಸರ್ಕಾರದ ನಿಯಮದಂತೆ OBC ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10-15 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.)
ಇದನ್ನೂ ಓದಿರಿ: ಕೊಪ್ಪಳ ಜಿಲ್ಲಾ ನ್ಯಾಯಾಲಯ ನೇಮಕಾತಿ: ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಿದ್ಯಾಹರ್ಹತೆ (Educational Qualification)
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಈ ಕೆಳಗಿನ ಯಾವುದಾದರೂ ಪದವಿ ಹೊಂದಿರಬೇಕು:
- ಯಾವುದೇ ಪದವಿ (Degree / Graduation)
- BE / B.Tech (ಇಂಜಿನಿಯರಿಂಗ್)
- MBA / MCA
ನೇಮಕಾತಿ ಸ್ಥಳ (Job Location)
ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರು (ಕರ್ನಾಟಕ), ದೆಹಲಿ, ಮುಂಬೈ ಅಥವಾ ಲಕ್ನೋ ನಗರಗಳಲ್ಲಿ ಕೆಲಸ ಮಾಡಲು ಅವಕಾಶವಿರುತ್ತದೆ.
ಆಯ್ಕೆ ಪ್ರಕ್ರಿಯೆ ಮತ್ತು ವೇತನ
- ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ (Written Test) ಮತ್ತು ಸಂದರ್ಶನದ (Interview) ಮೂಲಕ ಆಯ್ಕೆ ಮಾಡಲಾಗುತ್ತದೆ.
- ವೇತನ: ಸಂಸ್ಥೆಯ ನಿಯಮಾವಳಿಯಂತೆ ಆಕರ್ಷಕ ವೇತನ ಮತ್ತು ಇತರ ಸೌಲಭ್ಯಗಳನ್ನು ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು
- ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ – 10 ಡಿಸೆಂಬರ್ 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 04 ಜನವರಿ 2026
ಅರ್ಜಿ ಸಲ್ಲಿಸುವುದು ಹೇಗೆ?
- ಸಂಸ್ಥೆಯ ಅಧಿಕೃತ ವೆಬ್‌ಸೈಟ್ balmerlawrie.com ಗೆ ಭೇಟಿ ನೀಡಿ.
- ‘Careers’ ವಿಭಾಗದಲ್ಲಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
- ಕೆಳಗೆ ನೀಡಿರುವ ನೇರ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಿ.
- ನಿಮ್ಮ ಇಮೇಲ್ ಐಡಿ, ಫೋನ್ ಸಂಖ್ಯೆ ಮತ್ತು ಅಗತ್ಯ ದಾಖಲೆಗಳನ್ನು (Resume, Photo, Certificates) ಅಪ್‌ಲೋಡ್ ಮಾಡಿ.
- ಅರ್ಜಿಯನ್ನು ಸಬ್ಮಿಟ್ ಮಾಡಿ ಮತ್ತು ಮುಂದಿನ ಉಲ್ಲೇಖಕ್ಕಾಗಿ ಪ್ರಿಂಟ್ ತೆಗೆದುಕೊಳ್ಳಿ.
ಪ್ರಮುಖ ಲಿಂಕ್‌ಗಳು
- ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
- ಆನ್‌ಲೈನ್ ಅರ್ಜಿ ಸಲ್ಲಿಸಲು ಲಿಂಕ್: ಇಲ್ಲಿ ಕ್ಲಿಕ್ ಮಾಡಿ
- ಅಧಿಕೃತ ವೆಬ್ ಸೈಟ್: ಇಲ್ಲಿ ಕ್ಲಿಕ್ ಮಾಡಿ
ಯಾವುದೇ ಅರ್ಜಿ ಶುಲ್ಕವಿಲ್ಲದೆ ಕೇಂದ್ರ ಸರ್ಕಾರಿ ಸ್ವಾಮ್ಯದ ಕಂಪನಿಯಲ್ಲಿ ಉದ್ಯೋಗ ಪಡೆಯಲು ಇದೊಂದು ಉತ್ತಮ ಅವಕಾಶ. ಅರ್ಹ ಪದವೀಧರರು ತಡಮಾಡದೆ ಈ ಕೂಡಲೇ ಅರ್ಜಿ ಸಲ್ಲಿಸಿ.