ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್, ಅಧಿಕೃತ ಅಧಿಸೂಚನೆ ಅಕ್ಟೋಬರ್ 2025 ರ ಮೂಲಕ ತರಬೇತಿ (ಆಡಳಿತ ಮತ್ತು ಕಚೇರಿ ಕೆಲಸ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 17, 2025 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಬೆಂಗಳೂರು ಮತ್ತು ಮುಂಬೈ ಕೇಂದ್ರಗಳಲ್ಲಿ ಟ್ರೈನಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣವಕಾಶವಾಗಿದೆ.
ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಹುದ್ದೆಯ ಅಧಿಸೂಚನೆ
ಸಂಸ್ಥೆಯ ಹೆಸರು: ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್
ಹುದ್ದೆಗಳ ಸಂಖ್ಯೆ: ನಿರ್ದಿಷ್ಟಪಡಿಸಲಾಗಿಲ್ಲ
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ , ಮುಂಬೈ – ಮಹಾರಾಷ್ಟ್ರ
ಹುದ್ದೆಯ ಹೆಸರು: ತರಬೇತಿ (ಆಡಳಿತ ಮತ್ತು ಕಚೇರಿ ಕೆಲಸ)
ಸ್ಟೈಫಂಡ್: ತಿಂಗಳಿಗೆ ರೂ.22000/-
ಇದನ್ನೂ ಓದಿರಿ: ಬರೋಬ್ಬರಿ ₹1.5 ಲಕ್ಷ ಸ್ಕಾಲರ್ಶಿಪ್, ಕೋಟಕ್ ಕನ್ಯಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅ.31 ಕೊನೆಯ ದಿನ
ಶೈಕ್ಷಣಿಕ ಅರ್ಹತೆ
ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ
ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 31-ಆಗಸ್ಟ್-2025 ರಂತೆ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ
- ಕಿರುಪಟ್ಟಿ
- ಸಂದರ್ಶನ
ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ?
- ನೇಮಕಾತಿ ಅಧಿಸೂಚನೆ 2025 ಅನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
- ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳ ಪ್ರತಿಯನ್ನು ಅರ್ಜಿ ನಮೂನೆಗೆ ಲಗತ್ತಿಸಿ.
- ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ, ಇ-ಮೇಲ್ ಐಡಿ applications@canmoney.in ಮುಕಾಂತರ ಅಕ್ಟೋಬರ್ 17, 2025 ರ ಒಳಗೆ ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಕಳುಹಿಸಬಹುದು.
ಇದನ್ನೂ ಓದಿರಿ: IRCTC ನೇಮಕಾತಿ: ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಸಹಾಯಕ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು
- ಅಧಿಸೂಚನೆ ಬಿಡುಗಡೆ ದಿನಾಂಕ – ಅಕ್ಟೋಬರ್ 07, 2025
- ಇಮೇಲ್ ಕಳುಹಿಸಲು ಕೊನೆಯ ದಿನಾಂಕ – ಅಕ್ಟೋಬರ್ 17, 2025
ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: ಇಲ್ಲಿ ಕ್ಲಿಕ್ ಮಾಡಿ