ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನಲ್ಲಿ 1312 ಹೆಡ್‌ ಕಾನ್‌ಸ್ಟೇಬಲ್ (ಆರ್‌ಒ/ಆರ್‌ಎಂ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ..

ವಿದ್ಯಾರ್ಹತೆ :

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿಯ ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯ/ಸಂಸ್ಥೆ/ಬೋರ್ಡ್ ನಿಂದ ಪಿಯುಸಿ, ಹತ್ತನೇ ತರಗತಿ, ಹತ್ತನೇ ತರಗತಿ ಜೊತೆಗೆ ಐಟಿಐ ವಿದ್ಯಾರ್ಹತೆಯನ್ನು ಹೊಂದಿರಬೇಕು.

BSF ನೇಮಕಾತಿ 2022 ವಯೋಮಿತಿ :

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿಯ ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಟ 18 ರಿಂದ ಗರಿಷ್ಟ ೨5 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

BSF ನೇಮಕಾತಿ 2022 ವೇತನ :

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿಯ ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

BSF ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿಯ ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

BSF ನೇಮಕಾತಿ 2022 ಅರ್ಜಿ ಶುಲ್ಕ :

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿಯ ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಸಾಮಾನ್ಯ ಅಭ್ಯರ್ಥಿಯು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

BSF ನೇಮಕಾತಿ 2022 ಅರ್ಜಿ ಸಲ್ಲಿಕೆ :

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿಯ ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://rectt.bsf.gov.in/ ಗೆ ಭೇಟಿ ನೀಡಿ. ನಂತರ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಆಗಸ್ಟ್ 20,2022 ರಿಂದ ಸೆಪ್ಟೆಂಬರ್ 19,2022ರ ರಾತ್ರಿ 11:59ರೊಳಗೆ ಅರ್ಜಿಯನ್ನು ಹಾಕಬಹುದು.

 

 

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ