ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2025: 1149 ಅಪ್ರೆಂಟಿಸ್ ಹುದ್ದೆಗಳ ಭರ್ತಿ

Published On: October 5, 2025
Follow Us
east-central-railway-notification-2025-apply-online

ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ ಅಧಿಸೂಚನೆ:

ಸಂಸ್ಥೆಯ ಹೆಸರು: ಈಸ್ಟ್ ಸೆಂಟ್ರಲ್ ರೈಲ್ವೆ
ಹುದ್ದೆಗಳ ಸಂಖ್ಯೆ: 1149
ಉದ್ಯೋಗ ಸ್ಥಳ: ಭಾರತದಾದ್ಯಂತ
ಹುದ್ದೆ ಹೆಸರು: ಅಪ್ರೆಂಟಿಸ್ ಹುದ್ದೆಗಳು

ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2025 ಅರ್ಹತಾ ವಿವರಗಳು

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ಮಾಹಿತಿ: ಈಸ್ಟ್ ಸೆಂಟ್ರಲ್ ರೈಲ್ವೆ ಅಪ್ರೆಂಟಿಸ್ ಹುದ್ದೆಗಳನ್ನು ಫಿಟ್ಟರ್, ವೆಲ್ಡರ್, ಮೆಕ್ಯಾನಿಕ್ (ಡೀಸೆಲ್), ರೆಫ್ರಿಜರೇಷನ್ & ಎಸಿ ಮೆಕ್ಯಾನಿಕ್, ಫೋರ್ಜರ್ ಮತ್ತು ಹೀಟ್ ಟ್ರೀಟರ್, ಕಾರ್ಪೆಂಟರ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಪೇಂಟರ್ (ಜನರಲ್), ಇಲೆಕ್ಟ್ರಿಷಿಯನ್, ವಯರ್ ಮನ್, ಟರ್ನರ್, ಮಶಿನಿಸ್ಟ್, ಬ್ಲಾಕ್ ಸ್ಮಿತ್ ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಅಧಿಸೂಚನೆಯಲ್ಲಿ ನೀಡಲಾಗಿದೆ.

ವಯೋಮಿತಿ: ದಿನಾಂಕ 25 ಅಕ್ಟೋಬರ್ 2025ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.

ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ :
ಮೆರಿಟ್ ಲಿಸ್ಟ್
ದಾಖಲೆಗಳ ಪರಿಶೀಲನೆ

ಅರ್ಜಿ ಶುಲ್ಕ:
ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇಲ್ಲ
ಉಳಿದ ಅಭ್ಯರ್ಥಿಗಳಿಗೆ – ರೂ. 100

ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

  • ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
  • ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
  • ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
  • ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
  • ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆಗ ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 26, 2025
ಅರ್ಜಿ ಸಲ್ಲಿಕೆಗ ಕೊನೆಯ ದಿನಾಂಕ : ಅಕ್ಟೋಬರ್ 25, 2025

ಅಧಿಸೂಚನೆ ಪ್ರಮುಖ ಲಿಂಕ್‌ಗಳು

ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಿ ಇಲ್ಲಿ ಕ್ಲಿಕ್ ಮಾಡಿ

Mahesh Kumar M.

ಮಹೇಶ್ ಕುಮಾರ್ ಎಂ. ಅವರು 2020 ರಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಧ್ಯ ಉದ್ಯೋಗ ನ್ಯೂಸ್ ಮೂಲಕ ತಮ್ಮ ಓದುಗರಿಗೆ ನಿಖರ, ನೈಜ ಮತ್ತು ಸವಿವರವಾದ ಮಾಹಿತಿಯನ್ನು ತಲುಪಿಸುತ್ತಿದ್ದಾರೆ. ಇವರು ವಿಶೇಷವಾಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ಕುರಿತಾಗಿ ಆಳವಾದ ಅಧ್ಯಯನವನ್ನು ಇಟ್ಟುಕೊಂಡಿದ್ದು, ಯುವಕರಿಗೆ ಉದ್ಯೋಗದ ಮಾಹಿತಿಯನ್ನು ತಲುಪಿಸುವ ಗುರಿಯನ್ನು ಇಟ್ಟುಕೊಂಡಿದ್ದಾರೆ.

Join WhatsApp

Join Now

Join Telegram

Join Now

Leave a comment