ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (Karnataka State Police) ಅಕ್ಟೋಬರ್ 2025 ರ ಅಧಿಕೃತ ಅಧಿಸೂಚನೆಯ ಮೂಲಕ ಡಿಜಿಟಲ್ ಫೋರೆನ್ಸಿಕ್ ವಿಶ್ಲೇಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತರಿಗೆ ಇದು ಸುವರ್ಣಾವಕಾಶವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ಬೆಂಗಳೂರಿನ 8 ಸೈಬರ್ ಕ್ರೈಮ್ ಪೊಲೀಸ್ ಠಾಣೆಗಳಲ್ಲಿ ನೇಮಕ ಮಾಡಲಾಗುವುದು ಎಂದು ತಿಳಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 29, 2025 ಒಳಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಸೂಚನೆ
ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಪೊಲೀಸ್
ಹುದ್ದೆಗಳ ಸಂಖ್ಯೆ: 05
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ಹುದ್ದೆಯ ಹೆಸರು: ಡಿಜಿಟಲ್ ಫೋರೆನ್ಸಿಕ್ ವಿಶ್ಲೇಷಕ
ಸಂಬಳ: ತಿಂಗಳಿಗೆ ರೂ.50,000/-
ಶೈಕ್ಷಣಿಕ ಅರ್ಹತೆ
KSP ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ BCA, BE ಅಥವಾ B.Tech, MCA, M.Sc ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ
ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 25 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳ ಒಳಗಿರಬೇಕು.
ಆಯ್ಕೆ ಪ್ರಕ್ರಿಯೆ
- ಲಿಖಿತ ಪರೀಕ್ಷೆ
- ಸಂದರ್ಶನ
ವೇತನ
ಡಿಜಿಟಲ್ ಫೋರೆನ್ಸಿಕ್ ಅನಲಿಸ್ಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.50,000/- ನೀಡಲಾಗಿತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಕೆಎಸ್‌ಪಿ ನೇಮಕಾತಿ (ಡಿಜಿಟಲ್ ಫೋರೆನ್ಸಿಕ್ ವಿಶ್ಲೇಷಕ) ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
- ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳ ಬಗ್ಗೆ ಖಚಿತಪಡಿಸಿಕೊಳ್ಳಿ.
- ಗುರುತಿನ ದಾಖಲೆಗಳು, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಛಾಯಾಚಿತ್ರ,ಸಹಿ ಮಾಡಿದ ಮೂಲ ಪ್ರತಿ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳ ಪ್ರತಿಯನ್ನು ಅರ್ಜಿ ನಮೂನೆಗೆ ಲಗತ್ತಿಸಿ.
- ಕೆಳಗಿನ ಲಿಂಕ್‌ನಿಂದ ಅಥವಾ ಅಧಿಕೃತ ವೆಬ್ ಸೈಟ್ ನಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
- ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
- ಕೊನೆಗೆ ಅರ್ಜಿ ನಮೂನೆಯನ್ನು ಈ ವಿಳಾಸಕ್ಕೆ ಕಳುಹಿಸಿ – ಸಂಖ್ಯೆ 01, ಇನ್‌ಫೆಂಟ್ರಿ ರಸ್ತೆ, ಪೊಲೀಸ್ ಆಯುಕ್ತರು, ಬೆಂಗಳೂರು-560001 (ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ) ಅಥವಾ dcpadminbcp@ksp.gov.in ಗೆ ಇಮೇಲ್ ಮೂಲಕ ಅಕ್ಟೋಬರ್ 29, 2025 ರ ಒಳಗೆ ತಲುಪುವಂತೆ ಕಳುಹಿಸಿ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಅಕ್ಟೋಬರ್ 15, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 29, 2025
KSP ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ : ಇಲ್ಲಿ ಕ್ಲಿಕ್ ಮಾಡಿ