ಮಂಡ್ಯ ಜಿಲ್ಲಾ ಪಂಚಾಯತ ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲಾ ಪಂಚಾಯತದಲ್ಲಿ ವೃತ್ತಿಜೀವನವನ್ನು ಕಂಡುಕೊಳ್ಳಲು ಬಯಸಿದ್ದರೆ ಈ ಅವಕಾಶವನ್ನು ಬಳಸಿಕೊಳ್ಳಬಹುದು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ವಿವಿಧ ತಂತ್ರಾಂಶಗಳ ಅನುಷ್ಠಾನ ಮತ್ತು ಪ್ರಗತಿಯ ಬಗ್ಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆಯ ಇ-ಪಂಚಾಯತ್ ಕಾರ್ಯಕ್ರಮದಡಿ ಮಂಡ್ಯ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರ ಹುದ್ದೆಗೆ ಅಭ್ಯರ್ಥಿಯನ್ನು ಗೌರವಧನ ಆಧಾರದ ಮೇಲೆ ಸೇವೆಯನ್ನು ಪಡೆಯಲು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಮಂಡ್ಯ ಜಿಲ್ಲಾ ಪಂಚಾಯತ ಖಾಲಿ ಹುದ್ದೆಗಳ ಅಧಿಸೂಚನೆ
ಸಂಸ್ಥೆಯ ಹೆಸರು: ಮಂಡ್ಯ ಜಿಲ್ಲಾ ಪಂಚಾಯತ್
ಹುದ್ದೆಗಳ ಸಂಖ್ಯೆ: 01 ಹುದ್ದೆ
ಉದ್ಯೋಗ ಸ್ಥಳ: ಮಂಡ್ಯ – ಕರ್ನಾಟಕ
ಹುದ್ದೆಯ ಹೆಸರು: ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ
ಸಂಬಳ: ತಿಂಗಳಿಗೆ ರೂ.30,000/-
ಶೈಕ್ಷಣಿಕ ಅರ್ಹತೆ
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿ.ಇ (ಸಿ.ಎಸ್/ಇ & ಸಿ/ಐ.ಎಸ್/ಎ.ಐ) ಎಂ.ಸಿ.ಎ ಅಥವಾ ಬಿ.ಸಿ.ಎ ಪದವಿ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ
ಮಂಡ್ಯ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 30 ಸೆಪ್ಟೆಂಬರ್ 2025 ರಂತೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 40 ವರ್ಷ ವಯಸ್ಸಿನವರಾಗಿರಬೇಕು.
ಅರ್ಜಿ ಶುಲ್ಕ
ಮಂಡ್ಯ ಜಿಲ್ಲಾ ಪಂಚಾಯಿತಿ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ.
ಆಯ್ಕೆ ಪ್ರಕ್ರಿಯೆ
ಸಂದರ್ಶನ
ದಾಖಲೆ ಪರಿಶೀಲನೆ
ಮಂಡ್ಯ ಜಿಲ್ಲಾ ಪಂಚಾಯತ್ ನೇಮಕಾತಿಗೆ ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲನೆಯದಾಗಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
- ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ಐಡಿ ಪ್ರೂಫ್, ವಯಸ್ಸಿನ ದಾಖಲೆ, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.
- ಮಂಡ್ಯ ಜಿಲ್ಲಾ ಪಂಚಾಯತ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರು ಹುದ್ದೆಗೆ ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
- ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಸ್ವ ವಿವರಗಳನ್ನು ನಮೂದಿಸಿ. ಭಾವಚಿತ್ರ, ಸಹಿ ಹಾಗೂ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಅರ್ಜಿ ನಮೂನೆಯಲ್ಲಿ ನೀಡಿರುವ ಮಾಹಿತಿಗಳು ಸರಿಯಾಗಿವೆಯೇ ಎಂದು ಮತ್ತೊಮ್ಮೆ ಪರಿಶೀಲಿಸಿ ಪ್ರಿಂಟ್ ತೆಗೆದುಕೊಳ್ಳಿ.
- ಅರ್ಜಿ ಸಲ್ಲಿಕೆಯ ಸಮಯದಲ್ಲಿ ಮುಖ್ಯವಾಗಿ ಅರ್ಜಿ ಸಂಖ್ಯೆಯನ್ನು ಸೆರೆಹಿಡಿಯಿರಿ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 27 ಅಕ್ಟೋಬರ್ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 10 ನವೆಂಬರ್ 2025
ಅಧಿಸೂಚನೆ ಪ್ರಮುಖ ಲಿಂಕ್‌ಗಳು
| ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
| ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್‌ಸೈಟ್ | ಇಲ್ಲಿ ಕ್ಲಿಕ್ ಮಾಡಿ |
| ಉದ್ಯೋಗ ಸುದ್ದಿಗಾಗಿ | ಇಲ್ಲಿ ಕ್ಲಿಕ್ ಮಾಡಿ |