2025-26ನೇ ಸಾಲಿನ ಬಿ.ಇಡಿ ಕೋರ್ಸ್‌ಗೆ ಅರ್ಜಿ ಆಹ್ವಾನ.! ಇಲ್ಲಿದೆ ಸಂಪೂರ್ಣ ಮಾಹಿತಿ

Published On: October 12, 2025
Follow Us
online-application-invitation-for-b-ed-course

ಕರ್ನಾಟಕ ರಾಜ್ಯದ ಶಿಕ್ಷಣ ಇಲಾಖೆಯು 2025-26ನೇ ಶೈಕ್ಷಣಿಕ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸ್‌ಗೆ (Bachelor of Education) ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕೋರ್ಸ್ ಗಳಿಗೆ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಬಿಇಡಿ ಕಾಲೇಜುಗಳಲ್ಲಿ ಅರ್ಜಿಯನ್ನು ಸ್ವೀಕರಸಲಾಗುವುದು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಮೆರಿಟ್ ಪಟ್ಟಿಯಲ್ಲಿ ಪ್ರಕಟಮಾಡಲಾಗುತ್ತದೆ.

ಶಿಕ್ಷಕ ವೃತ್ತಿಯನ್ನು ಹೊಂದಲು ಆಕಾಂಕ್ಷೆ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 3, 2025 ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ಗಡುವಿನೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಬಿ.ಇಡಿ ಕೋರ್ಸ್‌ಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು

  • ಎಸ್.ಎಸ್.ಎಲ್.ಸಿ. ಅಂಕಪಟ್ಟಿ 
  • ಪಿ.ಯು.ಸಿ. ಅಂಕಪಟ್ಟಿ
  • ಕನ್ನಡ ಮಾಧ್ಯಮ ಮೀಸಲಾತಿಗಾಗಿ ಕನ್ನಡ ಮಾಧ್ಯಮ ಪ್ರಮಾಣಪತ್ರ
  • ಕರ್ನಾಟಕದ ಅಭ್ಯರ್ಥಿ ಎಂದು ಪರಿಗಣಿಸಲು ಕನಿಷ್ಠ 7 ವರ್ಷಗಳ ವ್ಯಾಸಂಗ ಪ್ರಮಾಣಪತ್ರ
  • ಮೀಸಲಾತಿ ಪಡೆಯುವ ಅರ್ಜಿದಾರರು ಮೀಸಲಾತಿ ಪ್ರಮಾಣಪತ್ರ
  • ಅಭ್ಯರ್ಥಿಯ ಛಾಯಾಚಿತ್ರ ಮತ್ತು ಸಹಿ ಸ್ಕ್ಯಾನ್ ಫೋಟೋ
  • ದೃಷ್ಟಿದೋಷವಿರುವ ಅಭ್ಯರ್ಥಿಗಳು ತಮ್ಮ ಎಡಗೈ ಹೆಬ್ಬೆರಳಿನ ಗುರುತು
  • ವಾಸ್ತವ್ಯ ಪ್ರಮಾಣಪತ್ರ

ಇದನ್ನೂ ಓದಿರಿ: JK Tyre Shiksha Sarthi Scholarship: ವಿದ್ಯಾರ್ಥಿ ವೇತನ 25000 ರೂ ಈ ಕೂಡಲೇ ಹೀಗೆ ಅರ್ಜಿ ಹಾಕಿ

ಅರ್ಜಿ ಶುಲ್ಕ

  • ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.
  • ಪ.ಜಾತಿ/ಪ.ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ – ರೂ.100
  • ಇತರೆ ಅಭ್ಯರ್ಥಿಗಳಿಗೆ-ರೂ.300

ಬಿ.ಇಡಿ ಕೋರ್ಸ್‌ಗೆ ಅರ್ಜಿ ಸಲ್ಲಿಸುವುದು ಹೇಗೆ ? 

  • ಕರ್ನಾಟಕ ಬಿ.ಇ.ಡಿ ಅರ್ಜಿ ನಮೂನೆ 2025 ಅನ್ನು ಭರ್ತಿ ಮಾಡಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ. (ಅಧಿಕೃತ ಅರ್ಜಿ ಲಿಂಕ್ ಕೆಳಗೆ ನೀಡಲಾಗಿದೆ)

online-application-invitation-for-b-ed-course

  • ನಂತರ Register ಬಟನ್ ಮೇಲೆ ಕ್ಲಿಕ್ ಮಾಡಿ, ಖಾತೆ ತೆರೆದು ಲಾಗಿನ್ ಮಾಡಿ.
  • ಮುಂದಿನ ಪರದೆಯಲ್ಲಿ ಅರ್ಜಿಯ ಕುರಿತಾಗಿ ಕೇಳಲಾಗಿರುವ ಎಲ್ಲ ಮಾಹಿತಿಗಳನ್ನು ಪೂರೈಸಿ.
  • ನಂತರ ಅರ್ಜಿ ಶುಲ್ಕವನ್ನು ಪಾವತಿಸಿ, ದಾಖಲೆಗೆ ಪ್ರತಿಯನ್ನು ಸೆರೆಹಿಡಿಯಿರಿ.
  • ನಂತರ Submit ಬಟನ್ ಒತ್ತಿ ನಿಮ್ಮ ಅರ್ಜಿಯನ್ನು ಸಲ್ಲಿಸಿ. ಅರ್ಜಿ ಸಲ್ಲಿಸಿದ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಲು ಮರೆಯದಿರಿ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – 03 ಅಕ್ಟೋಬರ್‌ 2025
ಅರ್ಜಿ ಸಲ್ಲಿಸಲು ಕೊನೆ ದಿನಾಂಕ – 03 ನವೆಂಬರ್‌ 2025

ಇದನ್ನೂ ಓದಿರಿSBI Platinum Jubilee Asha Scholarship: ನಿಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಇಲ್ಲಿದೆ ಹಣಕಾಸಿನ ನೆರವು..!

ಅರ್ಜಿ ಸಲ್ಲಿಸಲು ಪ್ರಮುಖ ಲಿಂಕುಗಳು

ಅಧಿಕೃತ ಅಧಿಸೂಚನೆ – ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ – ಇಲ್ಲಿ ಕ್ಲಿಕ್ ಮಾಡಿ

 

Mahesh Kumar M.

ಮಹೇಶ್ ಕುಮಾರ್ ಎಂ. ಅವರು 2020 ರಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಧ್ಯ ಉದ್ಯೋಗ ನ್ಯೂಸ್ ಮೂಲಕ ತಮ್ಮ ಓದುಗರಿಗೆ ನಿಖರ, ನೈಜ ಮತ್ತು ಸವಿವರವಾದ ಮಾಹಿತಿಯನ್ನು ತಲುಪಿಸುತ್ತಿದ್ದಾರೆ. ಇವರು ವಿಶೇಷವಾಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ಕುರಿತಾಗಿ ಆಳವಾದ ಅಧ್ಯಯನವನ್ನು ಇಟ್ಟುಕೊಂಡಿದ್ದು, ಯುವಕರಿಗೆ ಉದ್ಯೋಗದ ಮಾಹಿತಿಯನ್ನು ತಲುಪಿಸುವ ಗುರಿಯನ್ನು ಇಟ್ಟುಕೊಂಡಿದ್ದಾರೆ.

Join WhatsApp

Join Now

Join Telegram

Join Now

Leave a comment