ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕವಾಗಿ ಸಹಾಯ ಹಸ್ತ ನೀಡಲು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು 2025-26 ನೇ ಸಾಲಿಗೆ ಪ್ರೋತ್ಸಾಹಧನ ನೀಡಲು ಮುಂದಾಗಿದೆ. ಅರ್ಹ ಅಭ್ಯರ್ಥಿಗಳು ಡಿಸೇಂಬರ್ 30, 2025 ರ ಒಳಗೆ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.
ಪ್ರೌಢಶಾಲೆ ಅಧ್ಯಯನ ಮಾಡುತ್ತಿರುವವರಿಂದ ಹಿಡಿದು ಸ್ನಾತಕೋತ್ತರ ಪದವಿ ಹಾಗೂ ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ಕೋರ್ಸ್ ಗಳಲ್ಲಿ ಅಧ್ಯಯನದಲ್ಲಿ ತೊಡಗಿರುವವ ವಿದ್ಯಾರ್ಥಿಗಳು ಈ ಯೋಜನೆಯ ಒಳಗೆ ಬರುತ್ತಾರೆ. ಇದಲ್ಲದೇ ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗದ ಮಕ್ಕಳು ಶೇ.50 ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಕನಿಷ್ಠ ಶೇ.45 ಅಂಕಗಳೊಂದಿಗೆ ಉತ್ತೀರ್ಣರಾಗಿರುವುದು ಅವಶ್ಯವಾಗಿದೆ.
ಶೈಕ್ಷಣಿಕ ಪ್ರೋತ್ಸಾಹಧ ಯೋಜನೆಯ ಲಾಭ ಪಡೆಯಲು ಅರ್ಹತೆಗಳು
- ಪ್ರೌಢಶಾಲೆ, ಸ್ನಾತಕೋತ್ತರ ಪದವಿ ಹಾಗೂ ವೈದ್ಯಕೀಯ, ಇಂಜಿನಿಯರಿಂಗ್ ಓದುತ್ತಿರುವವರು ಅರ್ಜಿಯನ್ನು ಸಲ್ಲಿಸಬಹುದು .
- ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಗಳು ಹಿಂದಿನ ವರ್ಷ ಸಾಮಾನ್ಯ ವರ್ಗದ ಮಕ್ಕಳು ಶೇ.50 ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಕನಿಷ್ಠ ಶೇ.45 ಅಂಕಗಳೊಂದಿಗೆ ಉತ್ತೀರ್ಣರಾಗಿರುವುದು ಅವಶ್ಯವಾಗಿದೆ.
- ಕಾರ್ಮಿಕರ ಮಾಸಿಕ ವೇತನ ರೂ. 35,000/- ಒಳಗಿರಬೇಕು.
- ಒಂದೇ ಕುಟುಂಬದ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಈ ಸೌಲಭ್ಯ ಪಡೆದುಕೊಳ್ಳಲು ಅವಕಾಶವಿದೆ.
ಕರ್ನಾಟಕ ಜೀವವೈವಿಧ್ಯ ಮಂಡಳಿ ನೇಮಕಾತಿ 2025–ಸಲಹೆಗಾರ (ಸಸ್ಯಶಾಸ್ತ್ರ) ಹುದ್ದೆಗೆ ಅರ್ಜಿ ಸಲ್ಲಿಸಿ
ಶೈಕ್ಷಣಿಕ ಪ್ರೋತ್ಸಾಹಧ ಯೋಜನೆಯ ಲಾಭ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ ?
- ಅರ್ಜಿಯನ್ನು ಸಲ್ಲಿಸಬಯಸುವ ವಿದ್ಯಾರ್ಥಿಯು ತನ್ನ ಹಾಗೂ ತಂದೆ ತಾಯಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ಪದವಿ , ಸ್ನಾತಕೋತ್ತರ, ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಪದವಿಯ ಅಂಕಪಟ್ಟಿಗಳನ್ನು ತೆಗೆದಿಟ್ಟುಕೊಳ್ಳಬೇಕು.
- ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಜೊತೆಗೆ ಹಿಂದಿನ ಎರಡು ಸಾಲಿನ ಅಂಕಪಟ್ಟಿಯ ಪ್ರತಿಯನ್ನು ತೆಗೆದಿಟ್ಟುಕೊಳ್ಳಬೇಕು.
- ತಂದೆ ತಾಯಿ ಮರಣ ಹೊಂದಿದ್ದರೆ ಮರಣ ಪ್ರಮಾಣ ಪಾತ್ರವನ್ನು ತೆಗೆದಿಟ್ಟುಕೊಳ್ಳಬೇಕು.
- ಕೆಳಗೆ ನೀಡಲಾಗಿರುವ ಅಥವಾ ಅಧಿಕೃತ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್ ಸೈಟ್ ಗೆ ಭೇಟಿ ನೀಡಿ.
- ಅರ್ಜಿಯನ್ನು ಸಲ್ಲಿಸಲು Student ಆಯ್ಕೆಯನ್ನು ಅಥವಾ Notifications ನಲ್ಲಿರುವ ಶೈಕ್ಷಣಿಕ ಸಹಾಯಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ ಆಯ್ಕೆಯನ್ನು ಕ್ಲಿಕ್ಕಿಸಬೇಕು.
- ನಂತರ ಹೆಸರು, ಇ-ಮೇಲ್, ದೂರವಾಣಿ ಸಂಖ್ಯೆ ಮತ್ತು ಪಾಸ್ ವರ್ಡ್ ಬಳಸಿ Registar ಆಗಿ. ಅನಂತರ login ಮಾಡಿಕೊಳ್ಳಿ.
- ನಂತರ ಅಲ್ಲಿ ಕೇಳಲಾದ ಸ್ವ ವಿವರ ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಪೂರೈಸಿ.
- ಮತ್ತೊಮ್ಮೆ ಎಲ್ಲವೂ ಸರಿಯಾಗಿದೆಯೇ ಎಂದು ಪರಿಶೀಲಿಸಿಕೊಂಡು ಅರ್ಜಿ ಸಲ್ಲಿಸಿ.
- ಅರ್ಜಿ ಸಲ್ಲಿಸಿದ ದಾಖಲಾತಿಗಾಗಿ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಟ್ಟುಕೊಳ್ಳಿ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2025 – 8 ಹುದ್ದೆಗಳಿಗೆ ಅರ್ಜಿ ಆಹ್ವಾನ
ಶೈಕ್ಷಣಿಕ ಪ್ರೋತ್ಸಾಹಧ ಯೋಜನೆಯ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು, ಕೊನೆಯ ದಿನಾಂಕ ಡಿಸೇಂಬರ್ 30, 2025 ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆಯಿರಿ – ಕರ್ನಾಟಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ 48, 1 ನೇ ಮತ್ತು 2 ನೇ ಮಹಡಿ, ಮತ್ತಿಕೆರೆ ಮುಖ್ಯ ರಸ್ತೆ, ಯಶವಂತ್ ಪುರ ಬೆಂಗಳೂರು- 560022. ಅಥವಾ ದೂರವಾಣಿ ಸಂಖ್ಯೆ 080- 23475188 ಹಾಗೂ ಮೊಬೈಲ್ ಸಂಖ್ಯೆ 8277291175, 277120505, 9141585402, 9141602562 ಗೆ ಕರೆ ಮಾಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಶೈಕ್ಷಣಿಕ ಪ್ರೋತ್ಸಾಹಧ ಯೋಜನೆಯ ಅರ್ಜಿ ಸಲ್ಲಿಸಲು ಪ್ರಮುಖ ಲಿಂಕುಗಳು
ಅಧಿಕೃತ ವೆಬ್ ಸೈಟ್: ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ